Versions
KNV ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
ERVKN ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.
IRVKN ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.