Versions
KNV ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
ERVKN “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.
IRVKN ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.