Versions
KNV ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
ERVKN “ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
IRVKN ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.