Versions
KNV ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
ERVKN ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”
IRVKN ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” PS