Versions
KNV ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
ERVKN ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.
IRVKN ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.