Bible Versions
Bible Books

Exodus 34:20 (HCSB) Holman Christian Standard Bible

Versions

KNV   ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
ERVKN   ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.
IRVKN   ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us