Versions
KNV ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ERVKN “ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.
IRVKN ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು. PE