Bible Versions
Bible Books

Exodus 7:19 (HCSB) Holman Christian Standard Bible

Versions

KNV   ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
ERVKN   ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.
IRVKN   ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us