Bible Versions
Bible Books

Isaiah 65:16 (HCSB) Holman Christian Standard Bible

Versions

KNV   ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
ERVKN   ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತು ಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”
IRVKN   ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ
ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು;
ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us