Versions
KNV ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
ERVKN ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.
IRVKN ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು. PEPS