Versions
KNV ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
ERVKN ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.