Versions
KNV ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ERVKN ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.