Versions
KNV ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
ERVKN ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನಾನು, ನೀವು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.