Versions
KNV ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
ERVKN ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.