Versions
KNV ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ERVKN ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.