Versions
KNV ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
ERVKN ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.