Versions
KNV ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ERVKN ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.