Versions
KNV ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
ERVKN ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.