Versions
KNV ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ERVKN ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಇಂತೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವದಿಲ್ಲ.