Versions
KNV ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
ERVKN ಆದುದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡು ಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆ ಪಟ್ಟಿದ್ದಾನೆ” ಎಂದು ಹೇಳಿದನು.
IRVKN ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.