Versions
KNV ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
ERVKN ಆಗ ಸೌಲನು ತನ್ನ ಆಯುಧ ಹೊರುವವನಿಗೆ, “ನಿನ್ನ ಖಡ್ಗದಿಂದ ನನ್ನನ್ನು ಇರಿದು ಕೊಂದುಹಾಕು. ಆಗ ಪರದೇಶಿಯರು ಬಂದು ನನ್ನನ್ನು ಗಾಯಪಡಿಸಿ ಹಾಸ್ಯ ಮಾಡಲು ಸಾಧ್ಯವಾಗುವುದಿಲ್ಲ” ಎಂದನು. ಆದರೆ ಅವನ ಆಯುಧಹೊರುವವನು ಅದಕ್ಕೆ ಒಪ್ಪಲಿಲ್ಲ; ಸೌಲನನ್ನು ಕೊಲ್ಲಲು ಅವನು ಹೆದರಿದನು. ಆಗ ಸೌಲನು ತನ್ನ ಖಡ್ಗದ ಮೇಲೆ ತಾನೇ ಬಿದ್ದು ಸತ್ತನು.