Versions
KNV ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
ERVKN ಆ ಸಮಯದಲ್ಲಿ ಈ ಇಬ್ಬರು ರಾಜರು ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಬಳಿಯಲ್ಲಿದ್ದ ಸಿಂಹಾಸನಗಳ ಮೇಲೆ ಅವರು ಕುಳಿತಿದ್ದರು. ಅವರ ಎದುರಿನಲ್ಲಿ ಪ್ರವಾದಿಗಳೆಲ್ಲರೂ ನಿಂತಿದ್ದರು. ಪ್ರವಾದಿಗಳು ಪ್ರವಾದಿಸುತ್ತಿದ್ದರು.