Versions
KNV ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
ERVKN ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.