Versions
KNV ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ERVKN ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದು ಹೋಗುವುದು!” ಎಂದು ಹೇಳಿದನು.