Bible Versions
Bible Books

2 Kings 9:26 (KJV) King James Version

Versions

KNV   ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಹೊಲ ದಲ್ಲಿ ಹಾಕಿಬಿಡು ಅಂದನು.
ERVKN   ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾವುನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.
IRVKN   ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಮಾತು ನೆರವೇರುವಂತೆ ಇವನ ಶವವನ್ನು ಹೊಲದಲ್ಲಿ ಬಿಸಾಡು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us