Versions
KNV ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
ERVKN ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
IRVKN ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.