Versions
KNV ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ERVKN ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲು ಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.