Versions
KNV ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ERVKN ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆ ಆಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತು ಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.