Versions
KNV ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
ERVKN ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಈ ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಈ ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.