Versions
KNV ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.
ERVKN ಆದರೆ ಆರೋನನು ಮೋಶೆಗೆ, “ನೋಡು ಈ ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು.
IRVKN ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”