Versions
KNV ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
ERVKN ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.