Bible Versions
Bible Books

Deuteronomy 22:24 (KJV) King James Version

Versions

KNV   ಅವರಿಬ್ಬರನ್ನು ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ERVKN   ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
IRVKN   ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us