Versions
KNV ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
ERVKN ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.