Versions
KNV ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
ERVKN ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.
IRVKN ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. PEPS