Versions
KNV ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
ERVKN ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.