Versions
KNV ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ERVKN ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.
IRVKN ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. * 1 ಸಮು 11:6. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.