Versions
KNV ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
ERVKN ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿ ಮಾಡಲ್ಪಡುವವು. ಆಕೆಯ ಸೂಳೇತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.