Versions
KNV ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
ERVKN ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, “ಬನ್ನಿ, ಈ ದೇಶವನ್ನು ತೆಗೆದು ಕೊಳ್ಳಿರಿ” ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.