Versions
KNV ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
ERVKN ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.
IRVKN ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.