Versions
KNV ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
ERVKN ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದುದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪ ಮಾಡುವದಕ್ಕೆ ಪ್ರೋತ್ಸಾಹಿಸಿದನು.
IRVKN ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.