Versions
KNV ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.
ERVKN ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.
IRVKN ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.