Versions
KNV ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
ERVKN ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.
IRVKN ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು. PEPS