Versions
KNV ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
ERVKN ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.
IRVKN ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.