Versions
KNV ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.
ERVKN ಅಮ್ನೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು. ತಾಮಾರಳು ತನ್ನ ಸೋದರನಾದ ಅಮ್ನೋನನಿದ್ದ ಒಳಕೋಣೆಗೆ ಹೋದಳು. ಅವಳು ತಾನು ಮಾಡಿದ ರೊಟ್ಟಿಗಳನ್ನು ತಂದಳು.
IRVKN ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.