Versions
KNV ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ERVKN ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
IRVKN ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು,
ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು,
ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. PE