Versions
KNV ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
ERVKN “ಇಸ್ರೇಲರಿಗೆ ಹೀಗೆ ಹೇಳು: ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
IRVKN “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.