Versions
KNV ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
ERVKN “ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!
IRVKN “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.