Bible Versions
Bible Books

Acts 7:10 (KJVP) King James Version with Strong Number

Versions

KNV   ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
ERVKN   ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
IRVKN   ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us