Versions
KNV ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
ERVKN ಅಂಥ ಮನುಷ್ಯರಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ಪ್ರೀತಿಸುತ್ತೀರೊ ಇಲ್ಲವೊ ಎಂದು ನಿಮ್ಮನ್ನು ಪರೀಕ್ಷಿಸುವನು.
IRVKN ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.