Versions
KNV ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನೂಐ ಸಮಾಧಾನಯಜ್ಞವನೂಐ ಅರ್ಪಿಸಙೇಕು. ಆಗ ನಾನು ನಿಮಗೆ ಪ್ರಸನಐನಾಗುವೆನು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. PE